ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತಂತೆ ಶಾಸಕ ಗವಿಯಪ್ಪ, ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಅಪಸ್ವರ ಎತ್ತಿರುವ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರಿಗಾಗಿ ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಅದೇ ರೀತಿಯಾಗಿ ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಸಚಿವ ಸಂಪುಟದ ಪುನರ್ ರಚನೆ ಸುಳಿವು ಕೊಟ್ಟಿದ್ದಾರೆ. ಸೋನಿಯಾ ಗಾಂಧಿಯವರು ಕೂಡ ತಮ್ಮ ಪ್ರಧಾನಿ ಹುದ್ದೆಯನ್ನ ತ್ಯಜಿಸಿದ್ದರು. ಹಾಗೆ ಯಾರೂ ಕೂಡ ತಮ್ಮ ಹುದ್ದೆಯನ್ನು ತ್ಯಾಗ ಮಾಡುವುದಿಲ್ಲ. ನಾವು ಕೆಲ ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ. 2 ವರ್ಷದೊಳಗೆ ಅಧಿಕಾರ ತ್ಯಾಗ ಮಾಡಬೇಕು ಎಂದು ಹೇಳಿದ್ದೇವೆ. ಪರೋಕ್ಷವಾಗಿ ಸಂಪುಟ ಪುನಾರಚನೆ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಸುಳಿವು ನೀಡಿದ್ದಾರೆ.