ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಅಷ್ಟೇ ಅಲ್ಲದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ಟಿಕೆಟ್ ದರ ಕಡಿಮೆ ಆಗಲಿದೆ ಎಂದು ಹೇಳಿಕೆ ನೀಡಿದರು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿಲ್ಲ ಕೇಂದ್ರದವರು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆಯನ್ನು ಬಿಎಂಆರ್ಸಿಎಲ್ ಕೈಬಿಟ್ಟಿದೆ.
ಹಾಗಾಗಿ ಇಂದಿನಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಅವರಿಗೆ ಕೇಂದ್ರ ಸರ್ಕಾರದಿಂದ ಇ-ಮೇಲ್ ಮೂಲಕ ಸೂಚನೆ ಬಂದಿದ್ದು, ನಾಳೆಯಿಂದ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಬೇಡಿ ಎಂದು ಇ-ಮೇಲ್ ಬಂದಿದೆ. ಹಾಗಾಗಿ ನಾಳೆಯಿಂದ ಎಂದಿನಂತೆ ಈ ಹಿಂದಿನ ದರದಲ್ಲಿ ಮೆಟ್ರೋದಲ್ಲಿ ಪ್ರಯಾಣಿಕರು ಸಂಚರಿಸಬಹುದಾಗಿದೆ.








