ಬೆಂಗಳೂರು : ಬಳ್ಳಾರಿ ಪಾದಯಾತ್ರೆ ಮಾಡಲ್ಲ, ಬೃಹತ್ ಹೋರಾಟ ಮಾತ್ರ ನಡೆಸಲಾಗುತ್ತದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಪಾದಯಾತ್ರೆ ಇಲ್ಲ,ಜನವರಿ 17 ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕಾನೂನು ಸುವ್ಯವಸ್ಥೆ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.
ಪಾದಯಾತ್ರೆ ನಿರ್ಧಾರವನ್ನು ಹೈಕಮಾಂಡ್ ಗೆ ಬಿಟ್ಟಿದ್ದೇವೆ. ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಮಾತ್ರ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.








