ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಪಕ್ಷದವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಗೆ ಅನುಮತಿ ನೀಡಲ್ಲ, ಪಾದಯಾತ್ರೆಗೆ ನಾವು ಅವಕಾಶ ಕೊಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ. ನಮ್ಮ ತಕರಾರಿಲ್ಲ. ಆದರೆ ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು. ಆಗ ಬಿಜೆಪಿಯವರು ನಮ್ಮ ಪಾದಯಾತ್ರೆಗೆ ಅನುಮತಿ ನೀಡಿರಲಿಲ್ಲ. ಹೀಗಾಗಿ ಈಗಲೂ ಬಿಜೆಪಿ ಪಾದಯಾತ್ರೆ ತಡೆಯಲ್ಲ ಪಾದಯಾತ್ರೆಗೆ ಅನುಮತಿಯೂ ಕೊಡಲ್ಲ ಎಂದು ಹೇಳಿದ್ದಾರೆ.