ಬೆಂಗಳೂರು : ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ.
ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.
ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ @siddaramaiah ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್…
— CM of Karnataka (@CMofKarnataka) September 9, 2025