ನವದೆಹಲಿ: ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನ ಶನಿವಾರ ರಾತ್ರಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇನ್ನು 1985ರ ಬ್ಯಾಚ್ನ ನಿವೃತ್ತ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ನಿಯಮಿತ ಮುಖ್ಯಸ್ಥರನ್ನು ನೇಮಿಸುವವರೆಗೆ ಅಥವಾ ಮುಂದಿನ ಆದೇಶದವರೆಗೆ ಅವರ ಸ್ಥಾನದಲ್ಲಿ ನೇಮಿಸಲಾಗಿದೆ.
ಕಳೆದ ಎರಡು ತಿಂಗಳುಗಳಿಂದ, ದೇಶದ ಎರಡು ಅತಿದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ (UGC-NET) ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)ನಲ್ಲಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪದ ಮೇಲೆ ಎನ್ಟಿಎ ವಿವಾದದ ಮಧ್ಯದಲ್ಲಿದೆ.
ಹೊಸ ಕಾಯ್ದೆಯಡಿ ಸರ್ಕಾರಕ್ಕೆ ಸೂಪರ್ ಪವರ್ ; ತುರ್ತು ಸಂದರ್ಭಗಳಲ್ಲಿ ಎಲ್ಲಾ ‘ಟೆಲಿಕಾಂ ನೆಟ್ವರ್ಕ್’ಗಳ ನಿಯಂತ್ರಣ’