ಒಡಿಶಾದಲ್ಲಿ ಭಾನುವಾರ ಬೆಳಿಗ್ಗೆ ಟ್ರೈಲರ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 49ರ ಝಾರ್ಸುಗುಡ ಸದರ್ ಪೊಲೀಸ್ ಠಾಣೆ ಬಳಿ ವೇಗವಾಗಿ ಬಂದ ಟ್ರೈಲರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಝಾರ್ಸುಗುಡ ಎಸ್ಪಿ ಗುಂಡಲರೆಡ್ಡಿ ರಾಘವೇಂದ್ರ ದುರಂತದ ಬಗ್ಗೆ ಮಾಹಿತಿ ನೀಡಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ








