ಮೈಸೂರು : ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಮೂವರು ಅಧಿಕಾರಿಗಳ ವಿರುದ್ಧ ಇದೀಗ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ಪೆಕ್ಟರ್ ಗೋವಿಂದರಾಜು, ಹಾಗೂ ಎನ್ ಬೆಳ್ತೂರು ಗ್ರಾಮಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಬಿ ವಿ ಮಮತಾ ಕುಮಾರಿ ಎಂಬುವವರ ಬಳಿ 50,000 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಗುಂಡತ್ತೂರು ಗ್ರಾಮದ ಸರ್ವೆ ನಂಬರ್ 10ರ 5 ಎಕರೆ 1 ಗುಂಟೆ ಭೂಮಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಆದೇಶ ಉಲ್ಲಂಘಿಸಿ ಅಧಿಕಾರಿಗಳು ಆಸ್ತಿಯನ್ನು ಪರಭಾರೆ ಮಾಡಿದ್ದರು.
ಆಸ್ತಿ ಹಂಚಿಕೆ ಮಾಡಿ ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದರು. ಬಳಿಕ ಹಿಂದಿನಂತೆ ದಾಖಲೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ನಡುವೆ ಮೊದಲ ಹಂತವಾಗಿ 5000 ಫೋನ್ ಮೂಲಕ ಲಂಚ ಪಡೆದುಕೊಂಡಿದ್ದರು. ಲಂಚ ಸ್ವೀಕರಿಸುವ ವೇಳೆ ಮೂವರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಗಿ ಬಿದ್ದಿದ್ದಾರೆ.