ಬೆಂಗಳೂರು : ಕರ್ನಾಟಕದಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15 ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸಸ್ ಪ್ರೈ. ಲಿ. & ಎಎನ್ಐ ಟೆಕ್ನಾಲಜೀಸ್ ಪ್ರೈ. ಲಿ. ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ಬಿ.ಎಂ.ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.
ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.