ನವದೆಹಲಿ:370 ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಮಾರ್ ಅಬ್ದುಲ್ಲಾ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು
ಮುಖ್ಯಮಂತ್ರಿ ಮತ್ತು ಅವರ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವು ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ನಡೆಯಿತು.
ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾ ಅವರು ಮುಖ್ಯಮಂತ್ರಿ ಮತ್ತು ಅವರ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಸಕೀನಾ ಇಟೂ, ಜಾವೀದ್ ರಾಣಾ, ಸುರಿಂದರ್ ಚೌಧರಿ, ಜಾವೀದ್ ದಾರ್ ಮತ್ತು ಸತೀಶ್ ಶರ್ಮಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








