ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಹೊನ್ನಾವರ ತಾಲೂಕಿನ ವಲ್ಕಿಯ ತೌಫಿಕ್ ಅಹ್ಮದ್ ಜಿದ್ದಾ ಬಂಧಿತ ಆರೋಪಿ. ಜನವರಿ 19ರಂದು ಹಸುವಿನ ಹತ್ಯೆ ನಡೆದಿತ್ತು. ಹಸುವಿನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ ದೇಹದ ಭಾಗವನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದರು. ಈ ಘಟನೆ ಖಂಡಿಸಿ ಜಿಲ್ಲೆಯಾದ್ಯಂತ ಅಕ್ರೋಶ ವ್ಯಕ್ತವಾಗಿತ್ತು.
ಘಟನೆ ಹಿನ್ನೆಲೆ?
ಜನವರಿ 19ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹಸುವಿನ ತಲೆ ಕಡೆದು ದುಷ್ಕರ್ಮಿಗಳು ಮಾಂಸವನ್ನು ಕದ್ದು ಒಯ್ದಿದ್ದರು. ಕೃಷ್ಣ ಆಚಾರಿ ಎಂಬುವವರ ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹುಡಕಾಡಿದರೂ ಪತ್ತೆ ಆಗಿಲಿಲ್ಲ. ಆದರೆ ಮರುದಿನ ಬೆಳಗ್ಗೆ ಮಾಲೀಕರಿಗೆ ಆಘಾತ ಕಾದಿತ್ತು.
ಮನೆಯಿಂದ ಅನತಿ ದೂರದಲ್ಲೇ ಹಸುವಿನ ತಲೆ ಕತ್ತರಿಸಿ ಬಿದ್ದಿತ್ತು. ಹಸುವಿನ ಕಾಲು ಕಾಣಸಿತ್ತು. ದುಷ್ಟರು ಹಸುವಿನ ಮುಂಡ, ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನ ಹೊತ್ತೊಯ್ದಿದ್ದಾರೆ ಅಂತಾ ಹಸುವಿನ ಮಾಲೀಕರು ಕಣ್ಣೀರು ಹಾಕಿದ್ದರು. ಈ ಘಟನೆಯಿಂದ ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.