ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರ್ಘಟನೆಯೊಂದು ಸಂಭವಿಸಿದ್ದು, ನೀರಿನ ಸಂಪ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಪೂರ್ವ ತಾಲೂಕಿನ ಕುರುಡು ಸೊಣ್ಣೆಹಳ್ಳಿ ರಸ್ತೆಯ ಸಾಯಿ ನೆರಿನಿಟಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನಲ್ಲಿ ನೀರಿನ ಸಂಪ್ ಗೆ ಬಿದ್ದು ಬಿಹಾರ ಮೂಲದ ದಂಪತಿಯ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಕೂಲಿ ಕೆಲಸ ಮಾಡಿಕೊಂಡು ಮಕ್ಕಳ ಜೊತೆಗೆ ಮಗುವಿನ ಕುಟುಂಬ ವಾಸವಾಗಿತ್ತು. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲಿ ಪ್ರಕರಣ ನಡೆದಿದೆ.