ಬೆಂಗಳೂರು : ನೆಲಮಂಗಲದಲ್ಲಿ ಮತ್ತೊಂದು ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಕಾರು, ಆಟೋ, ಲಾರಿ ನಡುವೆ ಡಿಕ್ಕಿಯಾಗಿ ಆಟೋದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸರಣಿ ಅಪಘಾತದಲ್ಲಿ ಪೆಮ್ಮನಹಳ್ಳಿ ನಿವಾಸಿ ಈರಣ್ಣ (50) ಸಾವನ್ನಪ್ಪಿದ್ದು, ವೆಂಕಟಮ್ಮ (6), ಕೆಂಪರಾಜು (30) ಹಾಗೂ ನೂತನ್ (20) ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕನನ್ನು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.