ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರೋರಾತ್ರಿ ಭೀಕರವಾಗಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಬಳಿ ಎಸ್‌ಬಿಐ ಬ್ಯಾಂಕ್ ಹತ್ತಿರ ಪಾತ್ರೆ ಅಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ ಪಾತ್ರೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ದಾಸ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿವೆ.
ಹೌದು ಬೆಂಗಳೂರಲ್ಲಿ ರಾತ್ರೋರಾತ್ರಿ ಸಿಲಿಂಡರ್ ಸ್ಫೋಟವಾಗಿದ್ದು, ಸ್ಫೋಟದ ಭಯಾನಕದ ದೃಶ್ಯ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಾಂಬ್ ಬ್ಲಾಸ್ಟ್ ಎಂದು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಹುಳಿಮಾವು ಏರಿಯಾದ ಎಸ್ ಬಿ ಐ ಬ್ಯಾಂಕ್ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಟೀಲ್ ಪಾತ್ರೆ ಅಂಗಡಿಯಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ 10.35 ಸುಮಾರಿಗೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಆ ಸ್ಪೋಟದಲ್ಲಿ ರಾಹುಲ್ ದಾಸ್ ಎಂಬತನಿಗೆ ಗಾಯವಾಗಿದೆ. ಶೆಟರ್ ಮುಚ್ಚಿ ಕೆಲಸಗಾರ ರಾಹುಲ್ ದಾಸ್ ಅಂಗಡಿ ಒಳಗಿದ್ದ ಎಂದು ಹೇಳಲಾಗುತ್ತಿದೆ. ತಕ್ಷಣ ಇದೆ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಪೋಟಕ್ಕೆ ಅಕ್ರಮ ಗ್ಯಾಸ್ ರಿಫಲಿಂಗ್ ಗೆ ಕಾರಣ?
ಸ್ಪೋಟಕ್ಕೆ ಅಕ್ರಮ ಗ್ಯಾಸ್ ರಿಫಲಿಂಗ್ ಗೆ ಕಾರಣ ಎಂದು ಹೇಳಲಾಗುತ್ತಿದೆ. ಪಾತ್ರೆ ಅಂಗಡಿಯಲ್ಲಿ ಗ್ಯಾಸ್ ಸೋರಿಕೆಯಾಗುತ್ತಿತ್ತು. ಹೊರಗೆ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಹಾಕಲಾಗಿತ್ತು. ಚಾರ್ಜರ್ ತೆಗೆಯುವ ವೇಳೆ ಸ್ಪಾರ್ಕ್ ಆಗಿ ಸ್ಪೋಟ ಆಗಿರುವ ಶಂಕೆ ವ್ಯಕ್ತವಾಗಿದೆ. ಅಂಗಡಿ ಹೊರಗಡೆ ನಿಲ್ಲಿಸಿದ್ದ ಎರಡು ಬೈಕ್ ಗಳು ಛಿದ್ರ ಛಿದ್ರವಾಗಿವೆ. 200 ಮೀಟರ್ ವರೆಗೂ ಸ್ಫೋಟದ ತೀವ್ರತೆ ತಟ್ಟಿದೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಕೂಡ ಪುಡಿಪುಡಿಯಾಗಿವೆ. ಅದೃಷ್ಟವಶಾತ್ ಸ್ಫೋಟದ ವೇಳೆ ಯಾರು ಇಲ್ಲದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ.