ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ನಡೆದಿದ್ದು, ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, 13ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಪಾಪಣ್ಣಚಾರಿ ಮೃತ ದುರ್ವೈವಿ. ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶ್ರೀ ಭೈರವ ಕಪ್ ಹೆಸರಿನಲ್ಲಿ ಮೈಸೂರು ವಿಭಾಗ ಮಟ್ಟದ ಟೂರ್ನಮೆಂಟ್ ಆಯೋಜನೆ ಮಾಡಲಾಗಿತ್ತು. ನಿನ್ನೆ ಮತ್ತು ಇಂದು ನಡೆಯಬೇಕಿದ್ದ ಪಂದ್ಯಾವಳಿ ನಡೆಯಬೇಕಿತ್ತು. ಆದ್ರೆ ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದೆ.