ಜಲ್ಗಾಂವ್ : ಮಹಾರಾಷ್ಟ್ರದ ಜಲ್ಗಾಂವ್ನ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಒರ್ವ ಸಾವನ್ನಪ್ಪಿದ್ದು, ಕನಿಷ್ಠ 17 ಜನರು ಗಾಯಗೊಂಡಿದ್ದಾರೆ. ಸ್ಫೋಟದ ನಂತ್ರ ಇಡೀ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯೊಳಗೆ ಇನ್ನೂ ಕೆಲವರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.
ಈ ನಡುವೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಅರಣ್ಯ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಬಾ ಚಂದನ್ ಗ್ರಾಮದಿಂದ 5 ಕಿ.ಮೀ ದೂರದಲ್ಲಿರುವ ಕಾರ್ಖಾನೆಯ ಶೆಡ್ ನಂತಹ ರಚನೆಯಲ್ಲಿ ಕಾರ್ಮಿಕರು ‘ಸುಟ್ಲಿ’ ಬಾಂಬ್ ಗಳನ್ನು ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ ಪಿ) ಉಮಾಕಾಂತ್ ಚೌಧರಿ ತಿಳಿಸಿದ್ದಾರೆ.
‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಬಲ ಘೋಷಣೆ
ಪಂಚಭೂತಗಳಲ್ಲಿ ‘ಲೀನವಾದ’ ದ್ವಾರಕೀಶ್, ಕನ್ನಡದ ಕುಳ್ಳ ಇನ್ನೂ ನೆನಪು ಮಾತ್ರ!
5 ರೂ. ಚಿಲ್ಲರೆ ವಾಪಸ್ ಕೊಡದ BMTC ಬಸ್ ಕಂಡಕ್ಟರ್ ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ ಪ್ರಯಾಣಿಕ!