ಕೋಲಾರ : ಇಂದು ಕೋಲಾರದಲ್ಲಿ ಭೀಕರ ವಾದಂತಹ ಸರಣಿ ಅಪಘಾತ ಸಂಭವಿಸಿದ್ದು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ, ಇವಂದು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೋಲಾರ್ ಜಿಲ್ಲೆಯ ನರಸಾಪುರ ತಾಲೂಕಿನ ಬೆಳ್ಳೂರು ಬ್ರಿಡ್ಜ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರಿನ ಆರ್.ಟಿ ನಗರದ ನಿವಾಸಿ ಅಫ್ರೋಜ್ ಎಂದು ತಿಳಿದುಬಂದಿದೆ. ಬೆಳ್ಳೂರು ಗೇಟ್ ಬಳಿಯ ಚೆನ್ನೈ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 76ರಲ್ಲಿ ಇಂಡಿಕಾ, ಫಾರ್ಚುನರ್ ಹಾಗೂ ಪೊಲೋ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.ಘಟನೆಯಲ್ಲಿ ಗಾಯಗೊಂಡ ಐವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ವೇಮಗಲ್ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ