ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2022-23 ನೇ ಸಾಲಿನಿಂದ ನಾಲ್ಕು ವರ್ಷಗಳ ಅವಧಿವರೆಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಆ.20 ಕಡೆಯ ದಿನವಾಗಿದೆ.
ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.5000/- ಗಳನ್ನು ಶಿಷ್ಯವೇತನ ನೀಡಲಾಗುವುದು. ಅರ್ಜಿ ಸ್ವೀಕರಿಸುವ ಕೊನೆಯ ದಿನಕ್ಕೆ ಅಭ್ಯರ್ಥಿಯು ಅಡ್ವೊಕೇಟ್ ಆಗಿ ಕಾರ್ಯ ನಿರ್ವಹಿಸಲು ನಿಗದಿಪಡಿಸಿದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷಗಳ ಅವಧಿಯೊಳಗೆ ಇರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ವಯೋಮಿತಿ 30 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾರ ರೂ.3.50 ಲಕ್ಷ ಮೀರಿರಬಾರದು. ಪ್ರವರ್ಗ-1 ರಡಿ ಬರುವ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆದಾಯ ಮಿತಿ ಇಲ್ಲ.
ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೇಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ದೂ.ಸಂ: 08182-220206 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ