ಕೋಲಾರ : ಕೋಲಾರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕ್ರಶರ್‌ನಲ್ಲಿ ಬಂಡೆ ಒಡೆಯಲು ಸ್ಫೋಟಿಸುವ ವೇಳೆ ಕಲ್ಲು ಬಿದ್ದು ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ಮಾಲೂರು ತಾಲೂಕಿನ ಮಾಕಾರಹಳ್ಳಿ ಬಳಿ ನಡೆದಿದೆ.
ಮೃತ ಕಾರ್ಮಿಕನನ್ನು ಆಂಧ್ರಪ್ರದೇಶ ಮೂಲದ ವೆಂಕಟೇಶ್ (60) ಎಂದು ತಿಳಿದುಬಂದಿದೆ. ಇನ್ನು ಇದೆ ಘಟನೆಯಲ್ಲಿ ಹರೀಶ್ ಮತ್ತು ಈಶ್ವರ್ ಎಂಬುವರಿಗೆ ಗಾಯಗಳಾಗಿವೆ. ಬಂಡೆಯನ್ನು ಸ್ಫೋಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಕಲ್ಲು ಬಂಡೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.