ಬೆಂಗಳೂರು : ನಿನ್ನೆ ಕಾಶ್ಮೀರದ ಪಹಲ್ಗಾಮ್ ಪಟ್ಟಣದಲ್ಲಿನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರಿನ ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ನಿನ್ನೆ ಶಿವಮೊಗ್ಗ ಹಾಗು ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ಟೆಕ್ಕಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ಬೆಂಗಳೂರಿನ ರಾಮಮೂರ್ತಿ ನಗರದ ಮಧುಸೂದನ್ ಮೃತಪಟ್ಟವರು. ಮೂಲತಃ ಆಂಧ್ರಪ್ರದೇಶದವರಾದ ಮಧುಸೂದನ್ ಅವರು ರಾಮಮೂರ್ತಿ ನಗರದಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡು ಕುಟುಂಬಸ್ಥರ ಜತೆಗೆ ನೆಲಸಿದ್ದರು.
ಪತ್ನಿ, ಮಕ್ಕಳು ಹಾಗೂ ಸ್ನೇಹಿತರೊಂದಿಗೆ ಭಾನುವಾರ ಕಾಶ್ಮೀರದ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಪಹಲ್ಲಾಮ್ ಪಟ್ಟಣವನ್ನು ತಲುಪಿದ್ದರು. ಪತ್ನಿ, ಮಕ್ಕಳು ಹಾಗೂ ಸ್ನೇಹಿತರು ತಿಂಡಿ ತರಲು ತೆರಳಿದ್ದರು. ಮಧುಸೂದನ್ ರಾವ್ ಅವರು ಹುಲ್ಲಿನ ಮೇಲೆ ಕುಳಿತಿದ್ದರು. ಆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಗೆ ಮಧುಸೂದನ್ ಅವರು ಬಲಿಯಾಗಿದ್ದಾರೆ ಎಂದು ಗೊತ್ತಾಗಿದೆ.








