ಬಳ್ಳಾರಿ : ಕಳೆದ ವರ್ಷ ಬಳ್ಳಾರಿ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲಾ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆದರೆ ಇದೀಗ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನಪ್ಪಿದ್ದಾರೆ.
ಹೌದು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಾದೇವಿ (21) ಇದೀಗ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಬಾಣಂತಿಯನ್ನು ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಜನವರೀ 25ರಂದು ಸಿರಿಯನ್ ಮೂಲಕ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದರು.ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು.
ಐದು ದಿನದ ಬಳಿಕ ಮಾದೇವಿಗೆ ಇನ್ಫೆಕ್ಷನ್ ಆಗಿದೆ ಅಂತ ವೈದ್ಯರು ತಿಳಿಸಿದರು ನಿನ್ನೆ ರಾತ್ರಿ ತೀವ್ರ ಅಸ್ವಸ್ಥವಾಗಿ ಬಾಣಂತಿ ಮಹಾದೇವಿ ಸಾವನ್ನಪ್ಪಿದ್ದಾರೆ.ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಇದೀಗ ಮೃತ ಮಹದೇವಿ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.