ರಾಯಚೂರು : ರಾಜ್ಯದಲ್ಲಿ ಬಳ್ಳಾರಿ ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವೇ ಬೆಚ್ಚಿ ಬೆಳಿಸಿತ್ತು. ಆದರೆ ಬಾಣಂತಿಯರ ಮರಣ ಮೃದಂಗ ಇಂದಿಗೂ ಸಹ ನಿಲ್ಲುತ್ತಿಲ್ಲ. ಇದೀಗ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಇಂದು ಮತ್ತೋರ್ವ ಬಾಣಂತಿಯ ಸಾವಾಗಿದೆ.
ಹೌದು ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ ಸರಸ್ವತಿ (24) ಎಂದು ತಿಳಿದುಬಂದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಣಂತಿ ಸಾವನ್ನಪ್ಪಿದ್ದಾಳೆ. ಸದ್ಯ ಜಿಲ್ಲೆಯಲ್ಲಿ ಮೂರು ತಿಂಗಳಿನಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.