ಬೆಳಗಾವಿ : ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.
ಬೀಮ್ಸ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದ 31 ವರ್ಷದ ಅಂಜಲಿ ಮೃತ ಬಾಣಂತಿ. ನಿಲಜಿ ಗ್ರಾಮದ ನಿವಾಸಿಯಾಗಿದ್ದ ಅಂಜಲಿ ಹೆರಿಗೆಗೆಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಹೆಣ್ಣುಮಗುವಿಗೆ ಜನ್ಮ ನೀಡಿದ್ದ ಅಂಜಲಿ ಲೋ ಬಿಪಿಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಲೋ ಬಿಪಿಯಿಂದ ಬಾಣಂತಿ ಅಂಜಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.