ಬಾಗಲಕೋಟೆ : ತಾಂತ್ರಿಕ ದೋಷದಿಂದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದರಿಂದ ಕಾರಿನಲ್ಲಿದ್ದ ವ್ಯಕ್ತಿ ಸಜೀವವಾಗಿ ದಹನ ಗೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಾರಿನಲ್ಲಿದ್ದ ಸಂಗನಗೌಡ ಗೌಡರ್ (50) ಸಜೀವ ದಹನಗೊಂಡು ಸಾವನ್ನಪ್ಪಿದ್ದರೆ. ತಾಂತ್ರಿಕ ದೋಷದಿಂದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು ಬಾಗಲಕೋಟೆಯಿಂದ ಚಿಕ್ಕಮಗಿ ಕಡೆ ಕಾರು ಹೊರಟಿತ್ತು ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.