ರಾಮನಗರ : ಕಳೆದ ಶನಿವಾರದಂದು ರಾಮನಗರ ಜಿಲ್ಲೆಯ ಬಿಡದಿ ಬಳಿ ಕೈಗಾರಿಕಾ ಪ್ರದೇಶದಲ್ಲಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡಿದ್ದ 5 ಕಾರ್ಮಿಕರ ಪೈಕಿ ಇಂದು ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮೃತನನ್ನು ಉಮೇಶ್ ಕುಮಾರ್ (32) ಎಂದು ತಿಳಿದುಬಂದಿದೆ.
ಹೌದು ಬಿಡದಿಯ ಭೈರಮಂಗಲ ಕ್ರಾಸ್ ಬಳಿ ಇರುವ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಪೈಪ್ ಸ್ಫೋಟಗೊಂಡು ಐದು ಮಂದಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದ್ದು, ಈ ಪೈಕಿ ಇಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಒಣ ಕಸ ಸುಟ್ಟ ಬಳಿಕ, ಬೂದಿ ಹೊರಹೋಗುವ ಬಾಯ್ಲರ್ ಪೈಪ್ ನಲ್ಲಿ ಬ್ಲಾಕ್ ಆಗಿದೆ.ಈ ಸಂದರ್ಭದಲ್ಲಿ ಕಾರ್ಮಿಕರು ಯಾವುದೇ ಮುಂಜಾಗ್ರತಾ ಕ್ರಮವನ್ನು ವಹಿಸದೆ ಓಪನ್ ಮಾಡಿದ್ದಾರೆ. ಈ ವೇಳೆ ಬಾಯ್ಲರ್ ಸ್ಪೋಟಗೊಂಡು ಇದು ಅಂತ ಸಂಭವಿಸಿತ್ತು ಅಲ್ಲದೆ ಇಂದು ಘಟನಾ ಸ್ಥಳಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ ಅವರು ಸಹ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.