ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು ಸೋಲಾರ್ ಪಾರ್ಕ್ ನಿರ್ಮಿಸಲು ಬಂಡೆ ಸ್ಫೋಟಿಸುವಾಗ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೊರ್ವ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿ ಈ ಒಂದು ಘಟನೆ ಸಂಭವಿಸಿದೆ.
ಮೃತ ಕಾರ್ಮಿಕನನ್ನು ರಾಯಚೂರು ಮೂಲದ ಕಾರ್ಮಿಕ ಬಸವರಾಜ್ (46) ಸಾವನ್ನಪ್ಪಿದ್ದಾರೆ ಮತ್ತೋರ್ವ ಶಿವಯ್ಯ ಎಂಬುವರಿಗೆ ಗಾಯವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸ್ಥಳದಲ್ಲಿದ್ದ ಬಂಡೆ ಸ್ಪೋಟಿಸುವಾಗ ಈ ಒಂದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಬಳಸಿ ಬಂಡೆ ಸ್ಪೋಟಿಸಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಸ್ಫೋಟದ ತೀವ್ರತೆಗೆ ಸಮೀಪದಲ್ಲಿದ್ದ ಬೆಟ್ಟಕ್ಕೂ ಬೆಂಕಿ ವ್ಯಾಪಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸುವ ಕಾರ್ಯ ನಡೆಸಿದ್ದಾರೆ. ತಿರುಮಣಿ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.