ಚಿತ್ರದುರ್ಗ : ಕಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟೈರ್ ಸ್ಫೋಟಗೊಂಡು ಟ್ರಾಕ್ಟರ್ ನಲ್ಲಿದ್ದ ಓರ್ವ ಕಾರ್ಮಿಕ ಸಾವನಪ್ಪಿದ್ದು, ಉಳಿದ ಇಬ್ಬರು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಣುಕಾಪುರ ಗ್ರಾಮದಲ್ಲಿ ನಡೆದಿದೆ.
ರೇಣುಕಾಪುರ ಬಳಿ ಟ್ರಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಣುಕಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರೇಣುಕಾಪುರ ಗ್ರಾಮದ ಶಂಕರನಾಗ (40) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್ ನಲ್ಲಿದ್ದ ಮತ್ತಿಬ್ಬರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಕಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟೈಯರ್ ಸ್ಪೋಟಗೊಂಡು ಪಲ್ಟಿಯಾಗಿದೆ.ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.