ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಕಾರ್ಪೊರೇಷನ್ ಕಸದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೋಚಿಂಗ್ ಕ್ಲಾಸ್ ಗೆ ತೆರಳುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹಿಮ್ಸ್ ಆಸ್ಪತ್ರೆಯ ಹಿಂಭಾಗ ಈ ಒಂದು ಅಪಘಾತ ಸಂಭವಿಸಿದೆ.
ಯುವಕ ಅಧ್ವೈತ್ ಮತ್ತು ಆತನ ಸ್ನೇಹಿತ ಇಬ್ಬರು ಬೈಕ್ನಲ್ಲಿ ಕೋಚಿಂಗ್ ಕ್ಲಾಸ್ಗೆ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಸದ ಗಾಡಿಗೆ ಬೈಕ್ ಡಿಕ್ಕಿಯಾಗಿ ಅಧ್ವೈತ್ (18) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ವಿವೇಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡಂತಹ ವಿವೇಕ್ ಎನ್ನುವ ಯುವಕನಿಗೆ ಸದ್ಯ ಹುಬ್ಬಳ್ಳಿಯ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.