ಬೆಂಗಳೂರು : ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರತ್ಯೇಕ ಮೂರು ಪ್ರಕರಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದವು. ಆದರೆ ರಾಜ್ಯದಲ್ಲಿ ಈ ಒಂದು ಲವ್ ಜಿಹಾದ್ ಪ್ರಕರಣಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಏಕೆಂದರೆ ಇದೀಗ ಬೆಂಗಳೂರಿನಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಹೌದು ಬೆಂಗಳೂರಿನಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಮಾಡೆಲ್ ಹಾಗೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋ ಯುವತಿ ಮದುವೆಗೆ ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಜುಹೇದ್ ಎಂಬಾತ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಈ ಸಂಬಂಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಮದುವೆಯಾಗಲು ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಮತ್ತು ನಟಿಯಾಗಿದ್ದು, ಖಾಸಗಿ ಕಂಪನಿಯಲ್ಲೂ ಕೆಲಸ ಮಾಡ್ತಿದ್ರು ಎನ್ನಲಾಗ್ತಿದೆ. ಮಾಡೆಲಿಂಗ್ ಇಂಡಸ್ಟ್ರಿಯಲ್ಲಿರುವ ಆರೋಪಿ ಜುಹೇಬ್ ಎಂಬಾತ ಜೊತೆ ಯುವತಿಗೆ ಪರಿಚಯವಾಗಿತ್ತು. ಇಬ್ಬರು ಸ್ನೇಹಿತರಾಗಿದ್ದರು ಎನ್ನಲಾಗ್ತಿದೆ.
ಕಳೆದ ವಾರ ಹುಬ್ಬಳ್ಳಿಯಲ್ಲಿ ಕೂಡ ಇದೇ ರೀತಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈಗಾಗಲೇ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಒಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದೆ ತಡ ಹಳೆಯ ಪ್ರಕರಣಗಳು ಕೂಡ ಬೆಳಕಿಗೆ ಬಂದಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
Shocking incident in Frazer Town Bengaluru.
Source – Samvada channel#bengaluru #bangalore #frazertown @BlrCityPolice @blrcitytraffic @CPBlr @Jointcptraffic @alokkumar6994 @DgpKarnataka @KarnatakaCops @Lolita_TNIE @ChristinMP_ pic.twitter.com/YMwLfW7ap7
— Karnataka Portfolio (@karnatakaportf) April 15, 2026








