ಬೆಂಗಳೂರು : ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಇದೀಗ ರಾಜ್ಯಾದ್ಯಂತ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲಾಯಿತು. ಮುಜರಾಯಿ ಇಲಾಖೆಯ ಸೂಚನೆಯಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲಾಯಿತು.
ಗಡಿಯಲ್ಲಿ ಪಾಕಿಸ್ತಾನ ವಿರುದ್ಧ ಹೋರಾಡುತ್ತಿರುವ ವೀರ ಯೋಧರಿಗಾಗಿ ಪ್ರಾರ್ಥಿಸಿ ದೇವಸ್ಥಾನಗಳಲ್ಲಿ ಇದೀಗ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಬೆಂಗಳೂರಿನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅದೇ ರೀತಿಯಾಗಿ ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನ, ಕಲ್ಬುರ್ಗಿ ಜಿಲ್ಲೆಯ ಆಫಜಲ್ಪುರ ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನ, ಮೈಸೂರಿನ ಚಾಮುಂಡಿ ಬೆಟ್ಟ, ನಂಜನಗೂಡು ಸೇರಿದಂತೆ ಹಲವು ದೇಗುಲದಲ್ಲಿ ಸೈನಿಕರ ಹೆಸರಲ್ಲಿ ಪೂಜೆ ಸಲ್ಲಿಸಲಾಯಿತು