ಉತ್ತರಾಖಂಡ : ಉತ್ತರಾಖಂಡದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಉತ್ತರಕಾಶಿ ಜಿಲ್ಲೆಯ ಗಂಗಾನನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ.
ಬೆಳಿಗ್ಗೆ ಉತ್ತರಾಖಂಡದ ಉತ್ತರಕಾಶಿ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು ಆರು ಜನರಿದ್ದರು, ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಯಾಣಿಕರಿಂದ ತುಂಬಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿತ್ತು. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ತೆರಳಿವೆ. ಅಪಘಾತದ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
उत्तरकाशी-सुबह 9 बजे गंगनानी से आगे हुआ एक हेलीकॉप्टर हादसा,प्राइवेट कम्पनी का बताया जा रहा है
हेलीकॉप्टर, गंगोत्री की ओर जा रहा था ये हेलीकाफ्टर। 5 से 6 यात्री सवार थे जिसमें 2 लोग अभी घायल बताए जा रहे हैं।
उक्त स्थान हेतु पुलिस, आर्मी फोर्स, आपदा प्रबंधन QRT , टीम 108… https://t.co/ZXIoQWQjFt pic.twitter.com/BaB4l1RRep
— Pyara Uttarakhand प्यारा उत्तराखंड (@PyaraUKofficial) May 8, 2025