ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನ ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನ ವಿರೋಧಿಸಿ ಮಾರ್ಚ್ 31 ರಂದು ರಾಮ್ ಲೀಲಾ ಮೈದಾನದಲ್ಲಿ ನಡೆಯಲಿರುವ ಮೆಗಾ ರ್ಯಾಲಿಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತಹ ನಾಯಕರು ಭಾಗವಹಿಸುವ ರ್ಯಾಲಿಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದ ಭಾಗವಾಗಿರುವ ಹದಿಮೂರು ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ.

ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಕೂಡ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಭೂ ಹಗರಣ ಪ್ರಕರಣದಲ್ಲಿ ಹೇಮಂತ್ ಸೊರೆನ್ ಅವರನ್ನ ಜಾರಿ ನಿರ್ದೇಶನಾಲಯ (ED) ಜನವರಿಯಲ್ಲಿ ಬಂಧಿಸಿತ್ತು.

ಹಿರಿಯ ರಾಜಕಾರಣಿ ಶರದ್ ಪವಾರ್, ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್, ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ಸೇರಿದಂತೆ ಇತರ ನಾಯಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

 

“ಸರ್ಕಾರ ಬದಲಾದ ಬಳಿಕ CBI, ED ವಿರುದ್ಧ ಕಠಿಣ ಕ್ರಮ” ; ತನಿಖಾ ಸಂಸ್ಥೆಗಳಿಗೆ ‘ರಾಹುಲ್ ಗಾಂಧಿ’ ಎಚ್ಚರಿಕೆ

BREAKING : ಜೈಲಿನಲ್ಲಿರುವ ಎಎಪಿ ಸಚಿವ ‘ಸತ್ಯೇಂದರ್ ಜೈನ್’ ವಿರುದ್ಧ ‘CBI ತನಿಖೆ’ಗೆ ಗೃಹ ಸಚಿವಾಲಯ ಅನುಮತಿ

‘ಬೆಂಗಳೂರು ಕೆಫೆ ಬಾಂಬರ್’ನಂತಹ ತೀವ್ರಗಾಮಿಗಳ ಉಪಸ್ಥಿತಿ, ಭಾರತಕ್ಕೆ ಗಂಭೀರ ‘ಐಸಿಸ್ ಬೆದರಿಕೆ’ : ಇಂಟೆಲ್ ಮೂಲಗಳು

Share.
Exit mobile version