ಬೆಂಗಳೂರು : ಗಣೇಶ ವಿಸರ್ಜನೆಯ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿಡಿಮದ್ದುಗಳ ಬಳಕೆ ನಿಷೇಧ ಮಾಡಲಾಗಿದೆ. ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಪಟಾಕಿ ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧಿಸಲಾಗಿದೆ. ಪಟಾಕಿ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ನಿನ್ನೆ ಮುತ್ತೂರು ಗ್ರಾಮದಲ್ಲಿ ಪಟಾಕಿ ಸಿಡಿದು ಬಾಲಕ ಸಾವನ್ನಪ್ಪಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿತ್ತು. ಇದೀಗ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಸೇರಿದಂತೆ ಸಾರ್ವಜನಿಕ ಮತ್ತು ಧಾರ್ಮಿಕ ಸಭೆ ಸಮಾರಂಭಗಳಲ್ಲಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಖಡಕ್ ಆದೇಶ ಹೊರಡಿಸಿದ್ದಾರೆ.