ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಿತು. ಈ ಒಂದು ಸಚಿವ ಸಂಪುಟದಲ್ಲಿ ಮೆಟ್ರೋ 3ನೇ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಇದೀಗ ಅನುಮತಿ ನೀಡಿದೆ.
ಈ ವಿಚಾರವಾಗಿ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಮೆಟ್ರೋ ವಿಚಾರವಾಗಿ ಮೂರನೇ ಹಂತದ ಮೆಟ್ರೋ ಯೋಜನೆಗೆ ಅಂದಾಜು ವೆಚ್ಚ 40,424 ಕೋಟಿ ರೂ.ಗೆ ಅನುಮತಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭಮಾಡುತ್ತಿದ್ದೇವೆ ಎಂದು ಹೇಳಿದರು.
ಬಳಿಕ ಬೆಂಗಳೂರಿನಲ್ಲಿ ಅನೇಕ ಸಂಘ ಸಂಸ್ಥೆಗಳು, ದೇವಾಲಯಗಳು ಬಿಡಿಎ ವ್ಯಾಪ್ತಿಯಲ್ಲಿ ನಿವೇಶನ ತೆಗೆದುಕೊಂಡಿದ್ದು, ಅವರಿಗೆ ಒನ್ ಟೈಮ್ ಇನ್ವೆಸ್ಟ್ ಬೆನಿಫಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. 125 ದಿನಗಳ ಒಳಗಾಗಿ ಅವರು ಬಾಕಿಯಿರುವ ತೆರಿಗೆ ಪಾವತಿಸಿದರೆ ಬಡ್ಡಿ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು.
ಇನ್ನು ಟನಲ್ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಟೆಂಡರ್ ಕರೆಯುವ ಬಗ್ಗೆ ಚರ್ಚೆ ಮಾಡಲಾಗಿದೆ. ಹೈಬ್ರಿಡ್ ಮಾದರಿಯಲ್ಲಿ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಸಿಎಂ ಜತೆ ತಾಂತ್ರಿಕ ಅಂಶ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಈ ಟೆಂಡರ್ ಜಾಗತಿಕ ಟೆಂಡರ್ ಆಗಿರಲಿದೆ ಎಂದು ತಿಳಿಸಿದರು.