ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಬಳಿಕ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
ಆರ್ ಸಿಬಿ ಟ್ವೀಟರ್ ನಲ್ಲಿ 3 ತಿಂಗಳ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿ೦ದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ಧವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ.
ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು. ಅದರ ಫಲವೇ ಆರ್ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒ೦ದು ಯೋಜನೆ.
ಇ೦ದು ನಾವು ಮರಳಿದ್ದೇವೆ; ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮು೦ದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ. ಆರ್ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ.
Dear 12th Man Army, this is our heartfelt letter to you!
𝗜𝘁’𝘀 𝗯𝗲𝗲𝗻 𝗰𝗹𝗼𝘀𝗲 𝘁𝗼 𝘁𝗵𝗿𝗲𝗲 𝗺𝗼𝗻𝘁𝗵𝘀 𝘀𝗶𝗻𝗰𝗲 𝘄𝗲 𝗹𝗮𝘀𝘁 𝗽𝗼𝘀𝘁𝗲𝗱 𝗵𝗲𝗿𝗲.
The Silence wasn’t Absence. It was Grief.
This space was once filled with energy, memories and moments that you… pic.twitter.com/g0lOXAuYbd
— Royal Challengers Bengaluru (@RCBTweets) August 28, 2025