ತುಮಕೂರು : ಟೆಂಪೋ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದೆ.
ಗ್ರಾಮದ ತಿರುವಿನ ಬಳಿ ನಿಯಂತ್ರಣದ ತಪ್ಪಿ ಟೆಂಪೋ ಪಲ್ಟಿ ಆಗಿದೆ. ಸೆಂಟ್ರಿಂಗ್ ಕೆಲಸ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಈ ಭೀಕರವಾದ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಿರುಮಣಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.