ತುಮಕೂರು : ಇಂದು ನಸುಕಿನ ಜಾವ 4 ಗಂಟೆಗೆ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ಹೇಮಾವತಿ ನಾಲೆಗೆ ಉರುಳಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕಲ್ಲಹಳ್ಳ ಬಳಿ ನಡೆದಿದೆ.
ಹೌದು ನಿಯಂತ್ರಣ ತಪ್ಪಿ ಹೇಮಾವತಿಗೆ ನದಿ ನಾಲೆಗೆ ಕೆಎಸ್ಆರ್ಟಿಸಿ ಬಸ್ ಒಂದು ಉರುಳಿದೆ. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದಂತ ಗಾಯಗಳಾಗಿವೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಕಲ್ಲಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ.
ತುಮಕೂರಿನಿಂದ ಕುಣಿಗಲ್ ಕಡೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಹೇಮಾವತಿ ನದಿ ನಾಲೆಗೆ ಬಸ್ ನುಗ್ಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕುಣಿಗಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.