ಕೊಪ್ಪಳ : ಮಧ್ಯಾಹ್ನದ ಬಿಸಿ ಊಟವನ್ನು ಸೇವಿಸಿ ಸುಮಾರು 15ಕ್ಕೂ ಹೆಚ್ಚು ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥ ಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.ಮಧ್ಯಾಹ್ನ ಚಿತ್ರಾನ್ನ ಸೇವಿಸಿದ ನಂತರ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಶುರುವಾಗಿದೆ.ಅಸ್ವಸ್ಥಗೊಂಡ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆ ತಿಳಿದು ಪಿಎಚ್ಸಿಗೆ ಡಿಎಚ್ಒ ಡಾಕ್ಟರ್ ಲಿಂಗರಾಜ್ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇದೆ ವೇಳೆ ಸುದ್ದಿ ತಿಳಿದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಆಗಮಿಸಿದ್ದು, ಮಕ್ಕಳ ಸ್ಥಿತಿಯನ್ನು ಕಂಡು ಆತಂಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.