ವಿಜಯಪುರ : ಶಾರ್ಟ್ ಸರ್ಕ್ಯೂಟ್ ನಿಂದ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ ಸುಮಾರು 15ಕ್ಕೂ ಹೆಚ್ಚು ವಾಹನಗಳು ಸುಟ್ಟು ಬಸ್ಮವಾಗಿರುವ ಘಟನೆ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಈ ಒಂದು ಘಟನೆ ನಡೆದಿದೆ.
ವಿಜಯಪುರ ಗಾಂಧಿ ಚೌಕ್ ಹಿಂಭಾಗದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಅಪಘಾತ ಮತ್ತು ಇತರೆ ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಸುಮಾರು 15ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿವೆ. ಬೆಂಕಿಯ ಕೆನ್ನಾಲಿಗೆಗೆ ವಾಹನಗಳ ಟೈರ್ ಗಳು ಸ್ಫೋಟಗೊಳ್ಳುತ್ತಿವೆ. ಇತರೆ ವಾಹನಗಳಿಗೂ ಕೂಡ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.