ರಾಯಚೂರು : ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಹೌದು ನಿನ್ನೆ ರಾತ್ರಿ ಊಟ ಮಾಡಿದ ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಮಕ್ಕಳನ್ನು ಮಾನ್ವಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ನೀರು ಶುದ್ಧಿಕರಣಕ್ಕಾಗಿ ಟ್ಯಾಂಕ್ ನಲ್ಲಿ ಪುಡಿ ಬಳಕೆಯೆ ಕಾರಣ ಎಂದು ಆರೋಪ ಕೇಳಿ ಬಂದಿದೆ. ಅಲ್ಲದೆ ಇದೇ ನೀರಿನಿಂದ ಅಡುಗೆ ತಯಾರಿಸಿದ ಸಿಬ್ಬಂದಿಗಳು ಮಕ್ಕಳಿಗೆ ನೀಡಿದ್ದಾರೆ.ಊಟದ ಬಳಿಕ ಮಕ್ಕಳಲ್ಲಿ ವಾಂತಿ ಹೊಟ್ಟೆ ನೋವು ಭೇದಿ ಕಾಣಿಸಿಕೊಂಡಿದೆ. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.