ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು, ವಸತಿ ನಿಲಯದ ವಿದ್ಯಾರ್ಥಿಗಳು ಉಪಹಾರ ಸೇವಿಸಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಎಂಬ ಗ್ರಾಮದಲ್ಲಿ ವಸತಿ ನಿಲಯದಲ್ಲಿ ಇಂದು ಬೆಳಿಗ್ಗೆ ಉಪಹಾರ ಮಾಡಲಾಗಿತ್ತು. ಈ ವೇಳೆ ಉಪಹಾರ ಸೇವಿಸಿದ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇಧಿ ಕಾಣಿಸಿಕೊಂಡಿದೆ.ಫುಡ್ ಪಾಯಿಸನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ.
ಲಕ್ಕನಹಳ್ಳಿಯ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಈ ಒಂದು ಘಟನೆ ಸಂಭವಿಸಿದೆ. ತಕ್ಷಣ ಅವರನ್ನು ಶಿರಾ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರಾ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಸ್ಪತ್ರೆಗೆ THO ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.