ಮಂಡ್ಯ : ಮರಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಈ ಒಂದು ಘಟನೆಯಲ್ಲಿ ಮಕ್ಕಳಿಗೆ ಕೈ, ಕಾಲು ಮುರಿತವಾಗಿದ್ದು, ಇನ್ನು 5 ಜನರ ಸ್ಥಿತಿ ಚಿಂತಾಜನಕವಾಗಿದೆ.ಅಲಹಳ್ಳಿ ಗ್ರಾಮದಿಂದ ಕೆ ಆರ್ ಪೇಟೆಗೆ ಕೆಎಸ್ಆರ್‌ಟಿಸಿ ಬಸ್ ತೆರಳುತ್ತಿತ್ತು. ಬಸ್ನಲ್ಲಿ ಸುಮಾರು 25ಕ್ಕೂ ಹೆಚ್ಚು ಜನ ಮತ್ತು ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ತಕ್ಷಣ ಕೆಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಪಘಾತದ ಕುರಿತಂತೆ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.