ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿ ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಗ್ರಾಮದ ಸುಮಾರು 30ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿದ್ದಾರೆ.ಈ ವೇಳೆ ಅವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ವಾಂತಿ ಭೇದಿಯಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿದ್ದು, ಘಟನೆ ಕುರಿದಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.