ಬೆಳಗಾವಿ : ಸ್ಕೂಲ್ ಬಸ್ಗೆ ಟಿಪ್ಪರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದೆ 40ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಹೌದು ಕೊಲ್ಹಾಪುರದಿಂದ ಪ್ರವಾಸಕ್ಕೆ ಎಂದು ಬಂದಿದ್ದ ವಿದ್ಯಾರ್ಥಿಗಳು, ಶಾಲಾ ಬಸ್ ನಲ್ಲಿ ತೆರಳುತ್ತಿದ್ದ ವೇಳೆ, ವೇಗವಾಗಿ ಬಂದಂತಹ ಟಿಪ್ಪರ್ ಒಂದು ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ ತಕ್ಷಣ ಅವರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಲ್ಲಾಪುರದಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ರಾಣಿ ಚೆನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ವಿದ್ಯಾರ್ಥಿಗಳು ಭೇಟಿ ನೀಡಿದ್ದರು. ಪ್ರಾಣಿ ಸಂಗ್ರಹಾಲಯದಿಂದ ವಾಪಸಾಗುವಾಗ ಈ ಒಂದು ಅಪಘಾತ ಸಂಭವಿಸಿದೆ.ಗಯಾಳು ವಿದ್ಯಾರ್ಥಿಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಕಾಕತಿ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.