ಮಂಡ್ಯ : ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಇರುವ ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆಯಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ. ಮೇ. 7 ರಂದು ಡಾ. ಸುಬ್ಬಣ್ಣ ಅಯ್ಯಪ್ಪನ ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವವಾಗಿ ಪತ್ತೆಯಾಗಿದ್ದಾರೆ.
ಮೈಸೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆನೆಲೆಸಿದ್ದರು. ನಿನ್ನೆ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ನದಿಯಿಂದ ಶವ ತೆಗೆದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ ವಿಜ್ಞಾನಿ ಸ್ಕೂಟರ್ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಶ್ರೀರಂಗಪಟ್ಟಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.