ಹಾಸನ : ಯುವತಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸು ಎಂದು ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯನ್ನು ಸಂಗೀತ (21) ಎಂದು ಹೇಳಲಾಗುತ್ತಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಎಡಗೂಡು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಮೃತ ಸಂಗೀತಾ ಬಿಕಾಂ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದಳು.ಸಂಗೀತಾಳಿಗೆ ಪ್ರೀತಿಸು ಎಂದು ಶಿವು ಎನ್ನುವ ಯುವಕ ಪಡಿಸುತ್ತಿದ್ದ ಎಂದು ಹೇಳಲಾಗುತ್ತಿದೆ.ಅಲ್ಲದೆ ಇದೆ ವಿಷಯವಾಗಿ ಅವಾಚ್ಯವಾಗಿ ನಿಂದಿಸಿ ಆರೋಪಿಯು ಹಲ್ಲೆ ಕೂಡ ಮಾಡಿದ್ದ ಎಂದು ಹೇಳಲಾಗುತ್ತಿದ್ದು ಪ್ರೀತಿಸದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ.
ಇದರಿಂದ ಮನನೊಂದ ಸಂಗೀತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಆರೋಪಿಸಿ ಶಿವುನನ್ನು ಬೇಲೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಘಟನೆ ಕುರಿತಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.