ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ಕಳೆದ ಏಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಕನ್ನಡಿಗರು ಸೇರಿ 26 ಜನ ಅಮಾಯಕರು ಬಲಿಯಾಗಿದ್ದರು. ಇದೀಗ ಘಟನೆ ನಡೆದ ಸ್ಥಳದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಓಡಾಡುತ್ತಿದ್ದ ಶಂಕಿತನನ್ನು ಅರೆಸ್ಟ್ ಮಾಡಲಾಗಿದೆ.
ಹೌದು ಎಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಘಟನಾ ಸ್ಥಳದಲ್ಲಿ ಓಡಾಡುತ್ತಿದ್ದ ಶಂಕಿತ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಓಡಾಡುತ್ತಿದ್ದ ಶಂಕಿತನನ್ನು ಇದೀಗ ಭದ್ರತಾಪಡೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.