ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ.
ಪಹಲ್ಗಾಮ್ ಉಗ್ರ ದಾಲಿಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಿಸಿದೆ.