ಕರಾಚಿ:ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಬಜೌರ್ ಜಿಲ್ಲೆಯಲ್ಲಿ ಪೊಲೀಸ್ ವಾಹನದ ಬಳಿ ನಡೆದ ಬಾಂಬ್ ಸ್ಫೋಟದಲ್ಲಿ ಪೋಲಿಯೊ ಲಸಿಕೆ ತಂಡಗಳಿಗೆ ಭದ್ರತೆಯನ್ನು ಒದಗಿಸಲು ನಿಯೋಜಿಸಲಾಗಿದ್ದ ಕನಿಷ್ಠ ಐದು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಮೃತರು ಮತ್ತು ಗಾಯಾಳುಗಳನ್ನು ಖಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ಜಿಯೋ ನ್ಯೂಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಪರಿಣಾಮವಾಗಿ ಆ ಪ್ರದೇಶದಲ್ಲಿ ನಡೆಯುತ್ತಿರುವ ಪೋಲಿಯೊ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಲಕಂಡ್ ವಿಭಾಗದ ಕಮಿಷನರ್ ಸಾಕಿಬ್ ರಜಾ ತಿಳಿಸಿದ್ದಾರೆ.