ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿನ್ನೆ ಭಾರತ ಮತ್ತು ಪಾಕಿಸ್ತಾನ ಎರಡು ಕದನ ವಿರಾಮ ಘೋಷಿಸಿದ್ದವು. ಆದರೆ ತಡರಾತ್ರಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಭಾರತದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ತಕ್ಕ ಪ್ರತ್ಯುತ್ತರ ಭಾರತೀಯ ಸೇನೆ ಸಹ ನೀಡಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಮೇರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರ ಜೊತೆಗೆ ಫೋನ್ನಲ್ಲಿ ಮಾತನಾಡಿದ್ದು, ಯಾರ ಮಧ್ಯಸ್ಥಿಕೆಯು ನಮಗೆ ಇಷ್ಟವಿಲ್ಲ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ಹೌದು ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆಯು ಬೇಡ. ಆದರೆ ಉಗ್ರರನ್ನು ನಮಗೆ ಹಸ್ತಾಂತರ ಮಾಡಬೇಕು. ಪಾಕ್ ಅಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಯಾರು ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದು ನಮಗೆ ಇಷ್ಟವಿಲ್ಲ. ಕಾಶ್ಮೀರದ ಬಗ್ಗೆ ನಮಗೆ ಸ್ಪಷ್ಟವಾದ ನಿಲುವು ಇದೆ. ಅದರ ಬಗ್ಗೆ ಮಾತನಾಡಲು ಸಿದ್ಧರಿದ್ದರೆ ಚರ್ಚೆಗೆ ರೆಡಿ. ಅದು ಬಿಟ್ಟರೆ ಮಾತನಾಡಲು ಬೇರೇನು ಉಳಿದಿಲ್ಲ ಎಂದು ಜೆಡಿ ವ್ಯಾನ್ಸ್ ಕರೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಸಂದೇಶ ನೀಡಿದ್ದಾರೆ.
ಪಾಕಿಸ್ತಾನ ಮತ್ತೆ ದಾಳಿ ನಡೆಸಿದರೆ ತಕ್ಕ ತಿರುಗೇಟು ನೀಡುತ್ತೇವೆ. ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೀಗ ಖಡಕ್ ಎಚ್ಚರಿಕೆ ನೀಡಿದ್ದಾರೆ.ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆಗೆ ಚರ್ಚೆ ಮಾಡುವ ವೇಳೆ ಮೋದಿ ಹೇಳಿಕೆ ನೀಡಿದ್ದಾರೆ. ಫೋನ್ ನಲ್ಲಿ ಅಮೇರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆ ಚರ್ಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ನುಗ್ಗಿ ಮತ್ತೆ ಹೊಡಿತೇವೆ ಎಂದು ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಮೋದಿ ಅವರು ಈಗ ಸ್ಪಷ್ಟ ಸಂದೇಶ ನೀಡಿದ್ದಾರೆ.